Gruha Jyothi Registration: ಗೃಹ ಜ್ಯೋತಿಗೆ ಭರ್ಜರಿ ರೆಸ್ಪಾನ್ಸ್, ಮೊದಲ ದಿನ 55000 ಗ್ರಾಹಕರ ನೋಂದಣಿಬೆಂಗಳೂರು (ಜೂ.18): ರಾಜ್ಯದ ಎಲ್ಲಾ ಗೃಹ ಬಳಕೆ ಗ್ರಾಹಕರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ 'ಗೃಹ ಜ್ಯೋತಿ ಯೋಜನೆಯ ನೋಂದಣಿಯು ಸೇವಾ ಸಿಂಧು ಪೋರ್ಟಲ್ ನಲ್ಲಿ ಭಾನುವಾರವಾದ ಜೂನ್ 18ರಂದು ಆರಂಭಗೊಂಡಿತು.

ಭಾನುವಾರ ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ ಒಟ್ಟು 55000 ಗ್ರಾಹಕರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಸರಕಾರ ತಿಳಿಸಿದೆ.


ನೋಂದಣಿ ಪ್ರಕ್ರಿಯೆ ರಾಜ್ಯದ ಎಲ್ಲಾ ಕರ್ನಾಟಕ ಒನ್, ಗ್ರಾಮ್ ಒನ್ ಹಾಗು ಬೆಂಗಳೂರು ಒನ್ ಕೇಂದ್ರಗಳಲ್ಲಿ ಏಕಕಾಲದಲ್ಲಿ ಆರಂಭಗೊಂಡಿತು, ಯೋಜನೆಗೆ ನೋಂದಣಿಯನ್ನು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ಮಾಡಲಾಯಿತು. ನೋಂದಣಿಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದೆ


ಇ ಆಡಳಿತ ಇಲಾಖೆ ನೋಂದಣಿ ಪ್ರಕ್ರೀಯೆನ್ನು ಸರಳೀಕರಣಗೊಳಿಸಿದ್ದು, ಗ್ರಾಹಕರು ವಿದ್ಯುತ್ ಬಿಲ್ ನಲ್ಲಿರುವ ಖಾತೆ ಸಂಖ್ಯೆ, ತಮ್ಮ ಆಧಾರ್ ಸಂಖ್ಯೆ ಹಾಗು ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಭಾನುವಾರ ರಜಾ ದಿನವಾದರೂ, ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿ ಯೋಜನೆ ನೋಂದಣಿಯ ಮೇಲುಸ್ತುವಾರಿ ವಹಿಸಿ ಯಾವುದೇ ಗೊಂದಲ ಉಂಟಾಗದಂತೆ ನೋಡಿಕೊಂಡರು. 


ಗ್ರಾಹಕರು ಯೋಜನೆ ನೋಂದಣಿಗೆ ಯಾವುದೇ ದಾಖಲೆಗಳನ್ನು ಸಲ್ಲಿಸಬೇಕಾಗಿಲ್ಲ ಎಂದು ಇಂಧನ ಇಲಾಖೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಗ್ರಾಹಕರು ಮೊಬೈಲ್, ಲ್ಯಾಪ್ ಟಾಪ್ ಅಥವಾ ಸೈಬರ್ ಸೆಂಟರ್ ಗಳಿಗೆ ಹೋಗಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಯೋಜನೆ ಕುರಿತು ಹೆಚ್ಚಿನ ಮಾಹಿತಿಗಾಗಿ ಸಮೀಪದ ವಿದ್ಯುತ್ ಕಚೇರಿಯನ್ನು ಸಂಪರ್ಕಿಸಿ, ಇಲ್ಲವೆ 24x7 ಸಹಾಯವಾಣಿ ಸಂಖ್ಯೆ 1912 ಕ್ಕೆ ಕರೆಮಾಡಿ ಎಂದು ಮನವಿ ಮಾಡಿಕೊಂಡಿದೆ.


ನೋಂದಣಿ ಹೇಗೆ?
ರಾಜ್ಯ ಸರ್ಕಾರದ ಸೇವಾಸಿಂಧು ವೆಬ್‌ಸೈಟ್‌, ಆಯಪ್‌ನಲ್ಲಿ ಅರ್ಜಿ ಸಲ್ಲಿಸಬಹುದು
ಸರ್ಕಾರ ನೀಡಿರುವ ಕ್ಯೂ ಆರ್‌ ಕೋಡ್‌ ಸ್ಕ್ಯಾನ್ ಮಾಡಿದರೆ ಸುಲಭ ನೋಂದಣಿ
ಕರ್ನಾಟಕ ಒನ್‌, ಗ್ರಾಮ ಒನ್‌, ಬೆಂಗಳೂರು ಒನ್‌ನಲ್ಲೂ ಅರ್ಜಿ ಸಲ್ಲಿಸಬಹುದು
ನಾಡಕಚೇರಿ, ಇಂಧನ ಇಲಾಖೆ ಕಚೇರಿಗಳಲ್ಲೂ ಕೂಡ ನೋಂದಣಿಗೆ ಅವಕಾಶ
ಜನರು ಆಧಾರ್‌ ಸಂಖ್ಯೆ, ವಿದ್ಯುತ್‌ ಖಾತೆ ಸಂಖ್ಯೆ, ಮೊಬೈಲ್‌ ಸಂಖ್ಯೆ ನೀಡಬೇಕು
ಬಾಡಿಗೆದಾರರಾಗಿದ್ದರೆ ಮನೆ ವಾಸ ದೃಢೀಕರಣದ ಆಧಾರ್‌/ ವೋಟರ್‌ ಐಡಿ ನೀಡಿ
ಅರ್ಜಿ ಸಲ್ಲಿಕೆ ಬಗ್ಗೆ ಗೊಂದಲವಿದ್ದರೆ 1912 ಸಹಾಯವಾಣಿಗೆ ಕರೆ ಮಾಡಬಹುದು


ನೋಂದಣಿ ಮಾಡುವಾಗ ಆಧಾರ್‌ ಸಂಖ್ಯೆ, ವಿದ್ಯುತ್‌ ಬಿಲ್‌ನಲ್ಲಿ ನೀಡಲಾದ ವಿದ್ಯುತ್‌ ಖಾತೆ ಸಂಖ್ಯೆ, ಮೊಬೈಲ್‌ ಸಂಖ್ಯೆ ನಮೂದಿಸಬೇಕು. ಆಯ್ಕೆಗಳ ವೇಳೆ ಸ್ವಂತ ಮನೆ ಅಥವಾ ಬಾಡಿಗೆದಾರ ಎಂಬ ಆಯ್ಕೆ ಬರುತ್ತದೆ. ಬಾಡಿಗೆದಾರರಾಗಿದ್ದಲ್ಲಿ ಬಾಡಿಗೆ ಮನೆ ವಾಸ ದೃಢೀಕರಿಸುವ ಆಧಾರ್‌ ಅಥವಾ ಮತದಾರರ ಗುರುತಿನ ಚೀಟಿ ವಿವರಗಳನ್ನು ನೀಡಬೇಕು.

ಹಿಂದಿನ ವರ್ಷದ ಸರಾಸರಿ ಬಳಕೆಯ ಶೇ.10 ರಷ್ಟುಹೆಚ್ಚುವರಿ ವಿದ್ಯುತ್‌ ಉಚಿತವಾಗಿ ಬಳಸಬಹುದು. ಗರಿಷ್ಠ ವಿದ್ಯುತ್‌ ಬಳಕೆ ಮಿತಿ 200 ಯುನಿಟ್‌ ದಾಟಿದರೆ ಪೂರ್ಣ ಶುಲ್ಕ ಪಾವತಿಸಬೇಕು ಎಂದು ಇಂಧನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸ್ವೀಕಾರಕ್ಕೆ ಕಡೆಯ ದಿನಾಂಕ ಇಲ್ಲ.ನೋಂದಣಿ ಮಾಡುವಾಗ ಆಧಾರ್‌ ಸಂಖ್ಯೆ, ವಿದ್ಯುತ್‌ ಬಿಲ್‌ನಲ್ಲಿ ನೀಡಲಾದ ವಿದ್ಯುತ್‌ ಖಾತೆ ಸಂಖ್ಯೆ, ಮೊಬೈಲ್‌ ಸಂಖ್ಯೆ ನಮೂದಿಸಬೇಕು. ಆಯ್ಕೆಗಳ ವೇಳೆ ಸ್ವಂತ ಮನೆ ಅಥವಾ ಬಾಡಿಗೆದಾರ ಎಂಬ ಆಯ್ಕೆ ಬರುತ್ತದೆ. ಬಾಡಿಗೆದಾರರಾಗಿದ್ದಲ್ಲಿ ಬಾಡಿಗೆ ಮನೆ ವಾಸ ದೃಢೀಕರಿಸುವ ಆಧಾರ್‌ ಅಥವಾ ಮತದಾರರ ಗುರುತಿನ ಚೀಟಿ ವಿವರಗಳನ್ನು ನೀಡಬೇಕು.


ಹಿಂದಿನ ವರ್ಷದ ಸರಾಸರಿ ಬಳಕೆಯ ಶೇ.10 ರಷ್ಟುಹೆಚ್ಚುವರಿ ವಿದ್ಯುತ್‌ ಉಚಿತವಾಗಿ ಬಳಸಬಹುದು. ಗರಿಷ್ಠ ವಿದ್ಯುತ್‌ ಬಳಕೆ ಮಿತಿ 200 ಯುನಿಟ್‌ ದಾಟಿದರೆ ಪೂರ್ಣ ಶುಲ್ಕ ಪಾವತಿಸಬೇಕು ಎಂದು ಇಂಧನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸ್ವೀಕಾರಕ್ಕೆ ಕಡೆಯ ದಿನಾಂಕ ಇಲ್ಲ.


Post a Comment

Previous Post Next Post