EDII Recruitment 2023: ಸ್ಯಾಲರಿ ಪ್ಯಾಕೇಜ್ 1 ಲಕ್ಷ- ಈ ಹುದ್ದೆಗೆ ಈಗಲೇ ಅರ್ಜಿ ಹಾಕಿ



EDII Recruitment 2023: ಭಾರತೀಯ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ (Entrepreneurship Development Institute of India ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಪ್ರಾಜೆಕ್ಟ್ ಲೀಡರ್ಸ್, ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ.

ಸೆಪ್ಟೆಂಬರ್ 17, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಅಭ್ಯರ್ಥಿಗಳು ತಮ್ಮ ರೆಸ್ಯೂಮ್​ನ್ನು ಕೊನೆಯ ದಿನಾಂಕದೊಳಗೆ ಇ-ಮೇಲ್(E-Mail) ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ವಿದ್ಯಾರ್ಹತೆ:
ಪ್ರಾಜೆಕ್ಟ್ ಲೀಡರ್ಸ್ - ಸ್ನಾತಕೋತ್ತರ ಪದವಿ
ಪ್ರಾಜೆಕ್ಟ್ ಮ್ಯಾನೇಜರ್- ಸ್ನಾತಕೋತ್ತರ ಪದವಿ, ಪಿಎಚ್​.ಡಿ


ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ವೇತನ:
ಪ್ರಾಜೆಕ್ಟ್ ಲೀಡರ್ಸ್ - 8 ಲಕ್ಷ- 10 ಲಕ್ಷ (ವಾರ್ಷಿಕ ಪ್ಯಾಕೇಜ್)
ಪ್ರಾಜೆಕ್ಟ್ ಮ್ಯಾನೇಜರ್- 6 ಲಕ್ಷ- 8 ಲಕ್ಷ (ವಾರ್ಷಿಕ ಪ್ಯಾಕೇಜ್)

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ jobs@ediindia.org ಗೆ ಸೆಪ್ಟೆಂಬರ್ 17ರೊಳಗೆ ಕಳುಹಿಸಬೇಕು.


ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 28/08/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಸೆಪ್ಟೆಂಬರ್ 17, 2023


Post a Comment

Previous Post Next Post