HAL Recruitment: HALನಲ್ಲಿದೆ ಭರ್ಜರಿ ಉದ್ಯೋಗಾವಕಾಶ..! ತಿಂಗಳಿಗೆ 1,40,000 ಸಂಬಳ



HAL ನಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು, ಕೂಡಲೇ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 185 ಮ್ಯಾನೇಜ್​ಮೆಂಟ್​ ಮತ್ತು ಡಿಸೈನ್​ ಟ್ರೈನಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಹುದ್ದೆಗಳ ವಿವರ: ಡಿಸೈನ್​ ಇಂಜಿನಿಯರಿಂಗ್​ನಲ್ಲಿ 95, ಮ್ಯಾನೇಜ್​ಮೆಂಟ್​ ಟ್ರೈನಿಯಲ್ಲಿ ಒಟ್ಟು 90 ಹುದ್ದೆಗಳು.

ವಿದ್ಯಾರ್ಹತೆ: ಅಭ್ಯರ್ಥಿಗಳು ಏರೋನಾಟಿಕಲ್​, ಎಲೆಕ್ಟ್ರಾನಿಕ್ಸ್​, ಎಲೆಕ್ಟ್ರಿಕಲ್​, ಮೆಕ್ಯಾನಿಕಲ್​, ಕಂಪ್ಯೂಟರ್​ ಸೈನ್ಸ್​, ಮೆಟಾಲ್ಯೂರ್ಜಿ ವಿಷಯದಲ್ಲಿ ಬಿಇ ಅಥವಾ ಬಿಟೆಕ್​ ಪದವಿಯನ್ನು ಶೇ 60ರಷ್ಟು ಫಲಿತಾಂಶದೊಂದಿಗೆ ಉತ್ತೀರ್ಣರಾಗಿರಬೇಕು. ಅಂತಿಮ ವರ್ಷದ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಗರಿಷ್ಠ ವಯೋಮಿತಿ 28 ವರ್ಷ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ.

ಅರ್ಜಿ ಸಲ್ಲಿಕೆ ಹೇಗೆ?: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶೇಷಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಉಳಿದ ಅಭ್ಯರ್ಥಿಗಳು 500 ರೂ ಅರ್ಜಿ ಶುಲ್ಕ ಪಾವತಿಸಬೇಕು. ಅರ್ಜಿ ಶುಲ್ಕ ಪಾವತಿ ಮಾಡದ ಅರ್ಜಿಗಳನ್ನು ವಜಾ ಮಾಡಲಾಗುತ್ತದೆ.

ಅಭ್ಯರ್ಥಿಗಳನ್ನು ಆನ್​ಲೈನ್​ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹40 ಸಾವಿರದಿಂದ ₹1,40,000 ವರೆಗೆ ವೇತನ ನಿಗದಿಸಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳು ಮೊದಲ 5 ವರ್ಷಗಳ ಸೇವಾ ಒಪ್ಪಂದ ಬಾಂಡ್​​ಗೆ ಸಹಿ ಹಾಕಬೇಕಿದೆ.


Post a Comment

Previous Post Next Post