UIIC Recruitment 2023: ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿಯಲ್ಲಿ ಉದ್ಯೋಗಾವಕಾಶ

 


ಬೆಂಗಳೂರು: ಯುನೈಟೆಡ್‌ ಇಂಡಿಯಾ ಇನ್ಶೂರೆನ್ಸ್‌ ಕಂಪನಿ ಲಿಮಿಟೆಡ್‌ (ಯುಐಐಸಿ) ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 100 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.


ಸೆಪ್ಟೆಂಬರ್‌ 14ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ದೇಶದ ಪ್ರಮುಖ ವಿಮಾ ಸಂಸ್ಥೆಯಲ್ಲಿ ಉದ್ಯೋಗ ಪಡೆಯಲು ಬಯಸುವವರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಲಭ್ಯವಿರುವ ಹುದ್ದೆಗಳು, ವಿದ್ಯಾರ್ಹತೆ, ಅರ್ಜಿ ಸಲ್ಲಿಕೆ ವಿಧಾನ, ಆಯ್ಕೆ ಪ್ರಕ್ರಿಯೆ ಮತ್ತು ಇತರೆ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಹುದ್ದೆಗಳ ವಿವರ

ಲೀಗಲ್ ಸ್ಪೆಷಲಿಸ್ಟ್ - 25.

ಅಕೌಂಟ್ / ಫೈನಾನ್ಸ್ ಸ್ಪೆಷಲಿಸ್ಟ್ - 24.

ಕಂಪನಿ ಸ್ಪೆಷಲಿಸ್ಟ್ - 03.

ಅಕ್ಚರಿಸ್ - 03.

ವೈದ್ಯರು- 20.

ಇಂಜಿನಿಯರ್ಸ್ - 22.

ಅಗ್ರಿಕಲ್ಚರ್ ಸ್ಪೆಷಲಿಸ್ಟ್ - 03.

ವಿದ್ಯಾರ್ಹತೆ

ಮಾನ್ಯತೆ ಪಡೆದ ವಿಶ್ವ ವಿದ್ಯಾಲಯ ಅಥವಾ ವಿದ್ಯಾ ಸಂಸ್ಥೆಯಿಂದ ಹುದ್ದೆಗೆ ಅನುಗುಣವಾಗಿ ಪದವಿ / ಸ್ನಾತಕೋತ್ತರ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಲು ಅವಕಾಶವಿದೆ.

ವಯೋಮಿತಿ

ಕನಿಷ್ಠ 21, ಗರಿಷ್ಠ 30 ವರ್ಷ. ಒಬಿಸಿ 3 ವರ್ಷ, ಎಸ್ ಸಿ /ಎಸ್ಟಿ ಗೆ 5, ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೇ.

ಅರ್ಜಿ ಸಲ್ಲಿಕೆ

ಯು ಐ ಐ ಸಿ ಅಧಿಕೃತ ವೆಬ್ ಸೈಟ್ ನಲ್ಲಿ ರೆಜಿಸ್ಟರ್ ಮಾಡಿಕೊಂಡು ಅರ್ಜಿ ಸಲ್ಲಿಸಬೇಕು. ಅಗತ್ಯೆ ದಾಖಲಾತಿಗಳ ಅಪ್ ಲೋಡ್ ಮಾಡಿ ಕೆಟಗರಿ ಅನ್ವಯ ಅರ್ಜಿ ಶುಲ್ಕ ಪಾವತಿಸಬೇಕು.

ಅರ್ಜಿ ಶುಲ್ಕ

ಎಸ್ ಸಿ /ಎಸ್‌ಟಿ /ಅಂಗವಿಕಲ /ಕಂಪನಿಯ ಖಾಯಂ ಸದಸ್ಯರಿಗೆ 250 ರೂ. ಇತರೆ ಅಭ್ಯರ್ಥಿಗಳಿಗೆ 1000 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ

ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ಅಕ್ಟೋಬರ್ 2 ನೇ ವಾರದಲ್ಲಿ ಪರೀಕ್ಷೆ ನಡೆಯಲಿದ್ದು,7 ದಿನ ಮುಂಚಿತವಾಗಿ ಪ್ರವೇಶ ಪತ್ರ ಲಭ್ಯವಿರುತ್ತದೆ.

ಅರ್ಜಿ ಸಲ್ಲಿಸುವುದಕ್ಕೆ ಕೊನೆಯ ದಿನ: 14 ಸೆಪ್ಟೆಂಬರ್ 2023

ಹೆಚ್ಚಿನ ಮಾಹಿತಿ ಪಡೆಯಲು ಮತ್ತು ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್‌ ವಿಳಾಸ: uiic.co. in

  • ವರದಿ: ಅಕ್ಷರಾ ಕಿರಣ್‌

ಸಿಬ್ಬಂದಿ ನೇಮಕಾತಿ ಆಯೋಗದಿಂದ ಜೆಎಚ್‌ಟಿ ನೇಮಕಕ್ಕೆ ಅಧಿಸೂಚನೆ

ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್‌ ಹಿಂದಿ ಟ್ರಾನ್ಸ್‌ಲೇಟರ್‌ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರಕಾರದ ವಿವಿಧ ಇಲಾಖೆಗಳು, ಸಂಸ್ಥೆಗಳಲ್ಲಿ ಖಾಲಿ ಇರುವ ಹಿಂದಿ ಅನುವಾದಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಈ ನೇಮಕಾತಿ ಪರೀಕ್ಷೆ ನಡೆಯಲಿದೆ. ಅಕ್ಟೋಬರ್‌ 16ರಂದು ನೇಮಕಾತಿ ಪರೀಕ್ಷೆ ನಡೆಯಲಿದೆ. ಲಭ್ಯವಿರುವ ಹುದ್ದೆಗಳು, ಅರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ ಸೇರಿದಂತೆ ಹೆಚ್ಚಿನ ವಿವರ ಇಲ್ಲಿ ನೀಡಲಾಗಿದೆ.

Post a Comment

Previous Post Next Post