ಗಮನಿಸಿ: 'KSET-2023'ರ ಪರೀಕ್ಷೆಗೆ ಅರ್ಜಿ ಆಹ್ವಾನ, ನ.26ರಕ್ಕೆ ಎಕ್ಸಾಂ

 


ಬೆಂಗಳೂರು: KEAಯಿಂದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023 ( KSET-2023)ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕೆಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸೋದಕ್ಕೆ ಸೆ.30 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ.

ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈ ಸಂಬಂಧ ಅಧಿಸೂಚನೆ ಹೊರಡಿಸಿದೆ.

ಆ ಅಧಿಸೂಚನೆಯಲ್ಲಿ ಕರ್ನಾಟಕ ಸರ್ಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023(KSET-2023) ಅನ್ನು ನವೆಂಬರ್.26, 2023ರ ಭಾನುವಾರದಂದು ನಡೆಸಲಾಗುತ್ತಿದೆ. ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರೋದಾಗಿ ತಿಳಿಸಿದೆ.

ಅರ್ಜಿ ಸಲ್ಲಿಕೆ ವಿಧಾನ

ಅರ್ಹ ಅಭ್ಯರ್ಥಿಗಳು https://kea.kar.nic.in ಜಾಲತಾಣಕ್ಕೆ ಭೇಟಿ ನೀಡಿ, ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಲ್ಲದೇ ಕೇವಲ ಗಣಕೀಕೃತ ಅಂಚೆ ಕಚೇರಿಯ ಶಾಖೆಗಳಲ್ಲಿ ಮಾತ್ರ ಅರ್ಜಿ ಶುಲ್ಕ ಪಾವತಿಸುವಂತೆ ತಿಳಿಸಿದೆ.

ಪ್ರಮುಖ ದಿನಾಂಕಗಳು

ಕೆಸೆಟ್-2023ರ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 11-09-2023ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-09-2023 ಆಗಿದೆ. ಇ-ಪೋಸ್ಟ್ ಆಫೀಸ್ ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 03-01-2023 ಆಗಿರುತ್ತದೆ.

ಪರೀಕ್ಷಾ ಶುಲ್ಕ

ಕಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ, 3ಬಿ ಯವರಿಗೆ ರೂ.1,000. ಪ್ರವರ್ಗ-1, ಎಸ್ಸಿ, ಎಸ್ಟಿ, ಪಿಡಬ್ಲೂಡಿ, ಲಿಂಗ ಅಲ್ಪಸಂಖ್ಯಾತರಿಗೆ ರೂ.700 ಆಗಿದೆ.

ಕೆಸೆಟ್-2023 ಪರೀಕ್ಷೆ ತೆಗೆದುಕೊಳ್ಳಲು ಯಾವುದೇ ಗರಿಷ್ಠ ವಯೋಮಿತಿ ಇರೋದಿಲ್ಲ. ಈ ಸಂಬಂಧದ ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಕೆಇಎ ವೆಬ್ ಸೈಟ್ ಗೆ ಭೇಟಿ ನೀಡಿ ಪಡೆಯಬಹುದಾಗಿದೆ.



Post a Comment

Previous Post Next Post